ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ದಿನಕ್ಕೊಂದು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಸೋಲಿಲ್ಲ ಸರದಾರ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿರ್ಜುನ ಖರ್ಗೆ ವಿರುದ್ಧ ಈ ಬಾರಿ ಕ್ಷೇತ್ರದಲ್ಲಿ ವಿರೋಧದ ಅಲೆ ಎದ್ದಿದೆ.
SC ಮೀಸಲು ಕ್ಷೇತ್ರ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ದಿನಕ್ಕೊಂದು ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಪರ ಅಲೆ ಜೋರಾಗಿದೆ.
ಇದಕ್ಕೆ ಪೂರಕವೆಂಬಂತೆ ಕಾಂಗ್ರೆಸ್ ನಾಯಕರು ಒಬ್ಬೊಬ್ಬರಾಗಿ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಸಚಿವ ವೈಜನಾಥ್ ಪಾಟೀಲ್ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಬೆನ್ನಲ್ಲೇ ಇದೀಗ ಮತ್ತೊಬ್ಬ ಹಿರಿಯ ಕಾಂಗ್ರೆಸ್ ನಾಯಕ ಪಕ್ಷ ತೊರೆದಿದ್ದಾರೆ.
ಮಾಜಿ ಸಚಿವ ಡಾ. ಎ.ಬಿ. ಮಾಲಕರೆಡ್ಡಿ ಅವರು ಇಂದು [ಶುಕ್ರವಾರ] ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಸೇರ್ಪಡೆಯಾದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದು, ಖರ್ಗೆ ನಿದ್ದೆಗೆಡಿಸಿದೆ.

Comments
Post a Comment