ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿದ್ದರಾಮಯ್ಯ ಕಣಕ್ಕಿಳಿಯುವ ಸಾಧ್ಯತೆ ಇದೆ.
ಸ್ಪರ್ಧಾ ಕಣಕ್ಕೆ ಇಳಿಯುವ ಕುರಿತಂತೆ ಇಂದು ಬೆಂಗಳೂರಿನಲ್ಲಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಚರ್ಚೆ ನಡೆಸಿದರು.
ಕಳೆದ ಬಾರಿ ನಡೆದ ಉಪಚುನಾವಣೆಯಲ್ಲಿ ಡಾ. ಸಿದ್ದರಾಮಯ್ಯ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
ಮಂಡ್ಯ ಕ್ಷೇತ್ರದಲ್ಲಿನ ಸೀಟಿಗಾಗಿ ಜೆಡಿಎಸ್-ಕಾಂಗ್ರೆಸ್ ನಡುವೆ ಹಗ್ಗ ಜಗ್ಗಾಟ ನಡೆದಿರುವ ನಡುವೆಯೇ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಲೇಬೇಕು ಎಂಬ ಕೂಗು ಕಾರ್ಯಕರ್ತರಿಂದ ಕೇಳಿ ಬರುತ್ತಿದೆ. ಸಿದ್ದರಾಮಯ್ಯ ಸ್ಪರ್ಧೆ ಕುರಿತಂತೆ ತಲೆ ಕೆಡಿಸಿಕೊಳ್ಳಬೇಡಿ, ನಿಮ್ಮನ್ನು ಪರಿಗಣಿಸುತ್ತೇವೆ ಎಂದು ಭರವಸೆ ಯಡಿಯೂರಪ್ಪ ಭರವಸೆ ನೀಡಿದ್ದಾರೆ.


Comments
Post a Comment