ಹಾಸನ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ, ಮಾಜಿ ಸಚಿವ ಎ. ಮಂಜು ಕೊನೆಗೂ ಕಾಂಗ್ರೆಸ್ ಗೆ ಶಾಕ್ ಕೊಟ್ಟು, ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ನಿನ್ನೆ ಹಾಸನದ ಆರ್ ಪುರಂನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಎ.ಮಂಜು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದರು. ಆ ಮೂಲಕ ಅಧಿಕೃತವಾಗಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾದರು.
ಹಾಸನ ಶಾಸಕ ಪ್ರೀತಂ ಗೌಡ ಅವರು ಬಿಜೆಪಿ ಶಾಲು ಹೊದಿಸಿ, ಪಕ್ಷದ ಬಾವುಟ ನೀಡಿ ಸ್ವಾಗತ ನೀಡಿದರು. ಇಂದು ರಾಜ್ಯ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಮಂಜು ಅವರ ಸೇರ್ಪಡೆ ಬಗ್ಗೆ ಘೋಷಣೆಯಾಗಲಿದೆ. ಇದರೊಂದಿಗೆ ಹಾಸನದಲ್ಲಿ ಎ> ಮಂಜುಗೆ ಬಿಜೆಪಿ ಟಿಕೆಟ್ ಖಚಿತ ಎನ್ನಲಾಗಿದೆ.

Comments
Post a Comment