ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿಗೆ ಮತ್ತೊಂದು ಶಾಕ್ ಎದುರಾಗಿದೆ.
ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಅವರ ಸಹೋದರ ವೆಂಕಟೇಶ ಪ್ರಸಾದ್ ಇಂದು ಬಿಜೆಪಿ ಸೇರಲಿದ್ದಾರೆ. ಬಳ್ಳಾರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಬಿ. ಶ್ರೀರಾಮುಲು ನೇತೃತ್ವದಲ್ಲಿ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಬಿಜೆಪಿ ಸೇರಲಿದ್ದಾರೆ.
ನಾಗೇಂದ್ರ ಈಗಾಗಲೇ ಕಾಂಗ್ರೆಸ್ ನಿಂದ ದೂರವಾಗಿದ್ದಾರೆ. ಕಳೆದ ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಕೂಟದ ಅಭ್ಯರ್ಥಿಯಾಗಿದ್ದ ವಿ.ಎಸ್. ಉಗ್ರಪ್ಪ ಜಯಗಳಿಸಿದ್ದಾರೆ. ಈ ಬಾರಿ ಕ್ಷೇತ್ರವನ್ನು ತನ್ನ ತೆಕ್ಕೆಗೆ ಮರಳಿ ಪಡೆಯಬೇಕೆಂಬ ಉದ್ದೇಶದಿಂದ ಬಿಜೆಪಿ ಗೆಲುವಿಗೆ ಕಾರ್ಯತಂತ್ರ ರೂಪಿಸಿದೆ.
ಕಾಂಗ್ರೆಸ್ ಶಾಸಕ ನಾಗೇಂದ್ರ ಅವರ ಸಹೋದರ ವೆಂಕಟೇಶ್ ಪ್ರಸಾದ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರನ್ನು ಅಭ್ಯರ್ಥಿಯಾಗಿಸಲು ಚಿಂತನೆ ನಡೆಸಿದೆ. ಇಂದು ಬಳ್ಳಾರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವೆಂಕಟೇಶ ಪ್ರಸಾದ್ ಬಿಜೆಪಿ ಸೇರಲಿದ್ದಾರೆ.

Comments
Post a Comment