BreKing news!! ಕಾಂಗ್ರೆಸ್ ಮುಖಂಡ ಧಿಡೀರ್ ಬಿಜೆಪಿ ಗೆ ಸೇರ್ಪಡೆ


ಹಾಸನ ಲೋಕಸಭಾ ಕ್ಷೇತ್ರ ದಿಂದ ಸ್ಪರ್ಧೆಗಿಳಿಯುವ ಸಂಬಂಧ ಮಾಜಿ ಸಚಿವ ಎ. ಮಂಜು ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆ ಯಾಗುವುದು ಬಹುತೇಕ ಖಚಿತವಾಗಿದೆ. ಮಂಜು ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಆಗಿ ಮಾತುಕತೆ ನಡೆಸಿದ್ದು, ಪಕ್ಷ ಸೇರ್ಪಡೆಗೆ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.

ಹೀಗಾಗಿ, ಭಾನುವಾರ ನಡೆಯುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಹಾಸನದಿಂದ ಮಂಜು ಅವರ ಹೆಸರನ್ನು ಅಂತಿಮಗೊಳಿಸಿ ದೆಹಲಿಗೆ ಕಳುಹಿಸಿಕೊಡಲಾಗುವುದು. ಸೋಮವಾರ ಪಕ್ಷದ ಅಭ್ಯರ್ಥಿಗಳ ಪಟ್ಟಿ ಹೊರಬೀಳುವ ಮೊದಲೇ ಪಕ್ಷ ಸೇರ್ಪಡೆಯಾಗುವ ಸಂಭವವಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಸಮ್ಮಿಶ್ರ ಸರ್ಕಾರದ ಪಾಲುದಾರ

ಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಆಗಿರುವ ಸ್ಥಾನ ಹೊಂದಾಣಿಕೆ ಅನುಸಾರ ಹಾಸನ ಕ್ಷೇತ್ರ ಜೆಡಿಎಸ್ ಪಾಲಾಗಿದೆ. ಆದರೆ, ಹಾಸನ ಕ್ಷೇತ್ರದಿಂದ ಹಾಲಿ ಸಂಸದರೂ ಆಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೇ ಸ್ಪರ್ಧಿಸಬೇಕು. ಅವರ ಮೊಮ್ಮಗ ಪ್ರಜ್ವಲ್ ಅಭ್ಯರ್ಥಿಯಾದಲ್ಲಿ ತಾವು ವಿರೋಧಿಸುವುದಾಗಿ ಮಂಜು ಹೇಳಿದ್ದರು. ಆದರೆ, ಇದೀಗ ಪ್ರಜ್ವಲ್ ರೇವಣ್ಣ ಅವರನ್ನೇ ಅಭ್ಯರ್ಥಿಯನ್ನಾಗಿ ಎರಡು ದಿನಗಳ ಹಿಂದಷ್ಟೇ ಘೋಷಿಸಲಾಯಿತು.

Comments