ಅಪ್ಪ, ಮಕ್ಕಳಿಗೆ ಮಂಡ್ಯ, ಹಾಸನ, ತುಮಕೂರು ಲೋಕಸಭಾ ಕ್ಷೇತ್ರಗಳ ಚುನಾವಣೆಯ ಚಿಂತೆ. ಇವರನ್ನು ಮನೆಗೆ ಕಳುಹಿಸುತ್ತೇವೆ. ಚುನಾವಣಾ ಫಲಿತಾಂಶ ಹೊರ ಬರುತ್ತಿದ್ದಂತೆ ಮೈತ್ರಿ ಸರ್ಕಾರದ ಚಿತ್ರಣ ಸಂಪೂರ್ಣ ಬದಲಾಗಿ ಹೋಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದರು.
ಅಭಿವೃದ್ಧಿಯಲ್ಲಿ ಕರ್ನಾಟಕ ರಾಜ್ಯ 5 ವರ್ಷಗಳಷ್ಟುಹಿಂದಕ್ಕೆ ಹೋಗಿದೆ. ರಾಜ್ಯದ ಅಭಿವೃದ್ಧಿ ಕಡೆ ಮೈತ್ರಿ ಸರ್ಕಾರ ಗಮನಹರಿಸುತ್ತಿಲ್ಲ. ಈ ಎಲ್ಲದನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಬಿಎಸ್‌ವೈ ಹೇಳಿದರು.
ರಾಜ್ಯ ಸರ್ಕಾರದ ಆಡಳಿತ ವೈಫಲ್ಯತೆಯನ್ನು ಕಂಡಿರುವ ಜನ 22ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಿಸುವ ಮೂಲಕ ಈ ದೇಶದಲ್ಲಿ ಮತ್ತೆ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಅಧಿಕಾರಕ್ಕೆ ತರಲಿದ್ದಾರೆ.

Comments
Post a Comment