ಬಿಜೆಪಿ ಸರ್ಕಾರದ ಸಾಧನೆ ಕಳಪೆ ಅನಿಸಿದರೆ ಬೇರೆ ಪಕ್ಷಕ್ಕೆ ವೋಟ್ ಹಾಕಿ- ನಿತಿನ್ ಗಡ್ಕರಿ



ನವದೆಹಲಿ: ಕಳೆದ ಐದು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉತ್ತಮ ಆಡಳಿತ ನೀಡಿಲ್ಲ ಅನಿಸಿದರೆ ನೀವೂ ಬೇರೆ ಪಕ್ಷಕ್ಕೆ ಮತ ಹಾಕುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದ ನಾಗಪುರದ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸಾಧನೆ ಕಳಪೆ ಅನಿಸಿದರೆ ಮತದಾರ ಬೇರೆ ಪಕ್ಷಕ್ಕೆ ಮತ ಹಾಕಬಹುದು ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆ ಎಂದರೆ ಸರ್ಕಾರವೊಂದರ ಐದು ವರ್ಷದ ಆಡಳಿತಾವಧಿಯ ಪರಮಾರ್ಶೆಯಾಗಿದ್ದು ಜನ ನಮ್ಮ ಸರ್ಕಾರದ ಸಾಧನೆ ಗುರುತಿಸಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲಿದ್ದಾರೆ ಎಂಬ ವಿಶ್ವಾಸ ತಮಗಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

Comments