Breaking news !! 12 ಮಂದಿ ಪಕ್ಷೇತರ ಶಾಸಕರು ಹಾಗೂ 2 ಬಿಜೆಪಿ ಮುಖಂಡರು ಕಾಂಗ್ರೆಸ್ ಗೆ


ಇಬ್ಬರು ಬಿಜೆಪಿ ಮುಖಂಡರು ಹಾಗೂ 12 ಮಂದಿ ಪಕ್ಷೇತರ ಶಾಸಕರು ಮಂಗಳವಾರ ಸಂಜೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇಲ್ಲಿನ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್‌ನ ಶಕ್ತಿ ಸಮ್ಮೇಳನದಲ್ಲಿ ಘನಶ್ಯಾಮ್ ತಿವಾರಿ ಹಾಗೂ ಸುರೇಂದ್ರ ಗೋಯಲ್ ಅವರು ರಾಹುಲ್ ಗಾಂಧಿ ಸಮ್ಮುಖದಲ್ಲಿ ಪಕ್ಷ ಸೇರಿದರು. 

ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ತಿವಾರಿ ಅವರು 2018ರಲ್ಲೇ ಬಿಜೆಪಿಗೆ ರಾಜೀನಾಮೆ ನೀಡಿದ್ದರು. ಮುಖ್ಯಮಂತ್ರಿಯಾಗಿದ್ದ ವಸುಂಧರ ರಾಜೇ ವಿರುದ್ಧ ಬಹಿರಂಗವಾಗಿ ಟೀಕೆ ಮಾಡಿದ್ದ ತಿವಾರಿ, ರಾಜೇ ಭ್ರಷ್ಟಾಚಾರ ಕುರಿತಂತೆ ಪಕ್ಷದ ವರಿಷ್ಠರಿಗೆ ದೂರನ್ನೂ ನೀಡಿದ್ದರು.

ಪ್ರಜಾಪ್ರಭುತ್ವದ ರಕ್ಷಣೆಗಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದೇನೆ ಎಂದು ತಿವಾರಿ ಪ್ರತಿಕ್ರಿಯಿಸಿದ್ದಾರೆ. 12ರ ಪೈಕಿ 9 ಮಂದಿ ಕಾಂಗ್ರೆಸ್ ಬಂಡಾಯ ಶಾಸಕರಾಗಿದ್ದು, ಇವರೆಲ್ಲರೂ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ.

Comments