Breaking news !! ಪ್ರಧಾನಿ ನರೇಂದ್ರ ಮೋದಿ ಗೆ ಬಲಿಷ್ಠ ಸವಾಲ್ ಹಾಕಿದ ಸಿದ್ದರಾಮಯ್ಯ



ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಚಾಲೆಂಜ್ ವೊಂದನ್ನು ಹಾಕಿದ್ದಾರೆ.
ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಮೋದಿ ಅವರಿಗೆ ವಾರಣಾಸಿಯಲ್ಲಿ ಸ್ಪರ್ಧಿಸಿರುವ ಸೈನಿಕನನ್ನು ಬೆಂಬಲಿಸಿ ಸ್ಪರ್ಧೆಯಿಂದ ಹಿಂದೆ ಸರಿಯಿರಿ ಎಂದು ಸವಾಲೆಸೆದಿದ್ದಾರೆ.
ನಿಮಗೆ ನಿಜವಾಗಿಯೂ ಸೈನ್ಯ ಮತ್ತು ಸೈನಿಕರ ಬಗ್ಗೆ ಗೌರವವಿದ್ದರೆ ನಿಮ್ಮ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಿರುವ ಸೈನಿಕ ತೇಜ್ ಬಹದ್ದೂರ್ ಅವರನ್ನು ಬಹಿರಂಗವಾಗಿ ಬೆಂಬಲಸಿ, ಚುನಾವಣೆಯಿಂದ ಹಿಂದೆ ಸರಿಯಿರಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Comments