ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಹೊಗಳುವ ಭರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ ಇಬ್ರಾಹಿಂ ಕೂಡ ರಾಹುಲ್ ಗಾಂಧಿ ಅವರನ್ನು ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಸಿದ್ಧರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ.
ಬೀದರ್ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಬೇಕು. ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಹೇಳಿದ್ದಾರೆ.
ನರೇಂದ್ರ ಮೋದಿ ಹೆಸರನ್ನು ಅರ್ಧಕ್ಕೆ ಹೇಳುತ್ತಲೇ ಎಚ್ಚೆತ್ತುಕೊಂಡ ಸಿದ್ದರಾಮಯ್ಯ, ಬಳಿಕ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದು ತಮ್ಮ ಹೇಳಿಕೆಯನ್ನು ಪೂರ್ಣಗೊಳಿಸಿದ್ದಾರೆ.

Comments
Post a Comment