ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗದು. ಮೋದಿ ಪ್ರಭಾವವೂ ಆ ಪಕ್ಷಕ್ಕೆ ಅಧಿಕಾರ ತಂದುಕೊಡದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭವಿಷ್ಯ ನುಡಿದರು.
ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ದೋಸ್ತಿ ಅಭ್ಯರ್ಥಿ ಕೃಷ್ಣಬೈರೇಗೌಡ ಪರ ಬ್ಯಾಟರಾಯನಪುರದಲ್ಲಿ ಮಂಗಳವಾರ ಜಂಟಿ ಪ್ರಚಾರ ಸಭೆಯಲ್ಲಿ ಮಾತನಾಡಿ,''ಹಿಂದಿನ ಚುನಾವಣೆಯಲ್ಲಿ ಮೋದಿ ಅಲೆಯಿಂದ ಬಿಜೆಪಿಗೆ 282 ಸ್ಥಾನಗಳನ್ನು ಗಳಿಸಲು ಸಾಧ್ಯವಾಗಿತ್ತು. ಈ ಬಾರಿ ಹಿಂದಿಗಿಂತಲೂ ಕಡಿಮೆ ಸ್ಥಾನಗಳು ಸಿಗಲಿವೆ,'' ಎಂದರು.
''ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಮಧ್ಯೆ ಒಮ್ಮತ ಏರ್ಪಟ್ಟು, ಜಂಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ಎಲ್ಲರೂ ಜಂಟಿ ಪ್ರಚಾರದಲ್ಲಿ ತೊಡಗಿದ್ದಾರೆ. ನಮ್ಮ ಎದುರಾಳಿ ಬಿಜೆಪಿಯಿಂದ ಕನಿಷ್ಠ ಹತ್ತು ಸ್ಥಾನಗಳನ್ನು ಕಿತ್ತುಕೊಳ್ಳಬೇಕು. ಆಗ ಮಾತ್ರ ಎರಡೂ ಪಕ್ಷಗಳು ಒಟ್ಟಾಗಿದ್ದಕ್ಕೆ ಸಾರ್ಥಕವಾಗುತ್ತದೆ,'' ಎಂದರು.

Comments
Post a Comment