ಲೋಕಸಭೆ ಚುನಾವಣೆ ಆರಂಭಕ್ಕೂ ಮೊದಲೇ ಬಿಜೆಪಿಗೆ ಗೆಲುವು ಸಿಕ್ಕಿದೆ. ಲೋಕಸಭೆ ಚುನಾವಣೆಗೂ ಮೊದಲೇ ಅರುಣಾಚಲ ಪ್ರದೇಶದ 2 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ನಾಯಕ ರಾಮ್ ಮಾಧವ್ ತಿಳಿಸಿದ್ದಾರೆ.
ಅರುಣಾಚಲ ಪ್ರದೇಶದ ಅಲೋ ಪೂರ್ವ ಕ್ಷೇತ್ರದಿಂದ ಕೆಂಟೋ ಜಿನಿ, ಯಚುಲಿ ಕ್ಷೇತ್ರದಿಂದ ತಾಬಾ ತೆಡಿರ್ ಶಾಸಕರಾಗಿ ಆಯ್ಕೆಯಾಗಿದ್ದಾರೆ.
Comments
Post a Comment