ಬ್ರೇಕಿಂಗ್ ನ್ಯೂಸ್!! ಕಾಂಗ್ರೆಸ್ ತ್ಯಜಿಸಿದ ಬಿಜೆಪಿ ಗೆ ಸೇರ್ಪಡೆಯಾಗಳಿರುವ ? ಕರ್ನಾಟಕದ ಬಲಿಷ್ಠ ನಾಯಕ


ರಾಜ್ಯ ಕಾಂಗ್ರೆಸ್​ನಲ್ಲಿ ಮತ್ತೆ ಭಿನ್ನರಾಗ ಶುರುವಾಗಿದೆ. ಕಾಂಗ್ರೆಸ್​ ಹಿರಿಯ ನಾಯಕ ಶಾಸಕ ರೋಷನ್​ ಬೇಗ್ ಬಹಿರಂಗವಾಗಿ ರಾಜ್ಯ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದು ತಾವು ಪಕ್ಷ ಬಿಡಲು ಸಿದ್ಧ ಎಂದು ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ರೋಷನ್​ ಬೇಗ್, ಈ ಬಾರಿಯೂ ಎನ್​ಡಿಎ ಸರ್ಕಾರವೇ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಎನ್​ಡಿಎ ಮೈತ್ರಿಕೂಟ ಸರಳ ಬಹುಮತ ಪಡೆಯುವುದು ಬಹುತೇಕ ನಿಶ್ಚಳವಾಗಿದೆ. ಈ ಸಮೀಕ್ಷೆಗಳ ಕುರಿತು ನನಗೇನು ಆಶ್ಚರ್ಯವಿಲ್ಲ. ಇದೇ ಸಮಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಕಳಪೆ ಸಾಧನೆ ಮಾಡಲಿದೆ. ಬಹುತೇಕ ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಇದಕ್ಕೆ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕಾರಣ ಎಂದು ಅವರು ಆರೋಪಿಸಿರುವುದು ರಾಜ್ಯ ಕಾಂಗ್ರೆಸ್​ಗೆ ತಲೆ ನೋವಾಗಿ ಪರಿಣಮಿಸಿದೆ.

ಮಾಜಿ ಮುಖ್ಯಮಂತ್ರಿ ವಿರುದ್ಧವೂ ಟೀಕಾಪ್ರಹಾರ ನಡೆಸಿರುವ ಅವರು, ಚುನಾವಣಾ ನಾಯಕತ್ವ ವಹಿಸಿದ್ದ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯನವರೂ ಸಹ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿಲ್ಲ. ಪರಿಣಾಮ ಜನ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

Comments