ಸ್ಪೋಟಕ ಸುದ್ದಿ !! ಕುಮಾರಸ್ವಾಮಿ ರಾಜೀನಾಮೆ , ಮುಂದಿನ ಮುಖ್ಯಮಂತ್ರಿ ಯಾರು ??

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯದ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರಕ್ಕೆ ಅನಿರೀಕ್ಷಿತ ಆಘಾತ ತಂದಿದೆ. ಹೀನಾಯ ಸೋಲಿನಿಂದ ‘ದೋಸ್ತಿ’ ನಾಯಕರು ತೀವ್ರ ಮುಖಭಂಗಕ್ಕೆ ಗುರಿಯಾಗಿದ್ದಾರೆ. ಮೈತ್ರಿಕೂಟದ ಸೋಲಿನ ಬೆನ್ನಲ್ಲೇ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಶುಕ್ರವಾರ ಸಚಿವ ಸಂಪುಟ ಸಭೆ ಕರೆದಿರುವುದು ಮಹತ್ವ ಪಡೆದುಕೊಂಡಿದೆ.

ಫಲಿತಾಂಶದ ಹಿನ್ನೆಲೆಯಲ್ಲಿ ಚರ್ಚಿಸಲು ಮಧ್ಯಾಹ್ನ 12.30ಕ್ಕೆ ಸಚಿವ ಸಂಪುಟದ ಅನೌಪಚಾರಿಕ ಸಭೆ ನಡೆಯಲಿದೆ. ಬಳಿಕ 1 ಗಂಟೆಗೆ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಪಕ್ಷದ ಕಚೇರಿಯಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. 18ರಿಂದ 20 ಸ್ಥಾನ ಗೆಲ್ಲುವ ನಿರೀಕ್ಷೆಯಲ್ಲಿದ್ದ ಮೈತ್ರಿಕೂಟಕ್ಕೆ ಸಿಕ್ಕಿರುವುದು 2 ಸ್ಥಾನಗಳು ಮಾತ್ರ. ಸ್ವತಃ ತಮ್ಮ ಪುತ್ರ ಮಂಡ್ಯದಲ್ಲಿ ಪರಾಭವಗೊಂಡಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲು ಸಿಎಂ ಕುಮಾರಸ್ವಾಮಿ ಮುಂದಾಗಲಿದ್ದಾರೆಯೇ ಎಂಬ ಕುತೂಹಲ ಉಂಟಾಗಿದೆ.

Comments