2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ದಾಖಲೆ ನಿರ್ಮಿಸುವ ಮೂಲಕ ಹೊಸ ಇತಿಹಾಸವನ್ನು ಬರೆದಿದೆ. ಬಿಜೆಪಿಯ ಈ ಐತಿಹಾಸಿಕ ಗೆಲುವಿನ ಜೊತೆಗೆ ಹಲವಾರು ಹೊಸ ದಾಖಲೆಗಳು ಸೇರ್ಪಡೆಗೊಂಡಿದೆ. ಮೊಟ್ಟ ಮೊದಲ ಬಾರಿಗೆ ಸುಮಾರು 70 ಕ್ಕೂ ಅಧಿಕ ಮಹಿಳಾ ಸಂಸದರು ಲೋಕಸಭೆ ಪ್ರವೇಶಿಸುತ್ತಿದ್ದರೆ.
ಕರ್ನಾಟಕದಿಂದ ಈ ಬಾರಿ ಸುಮಾರು ಇಪ್ಪತ್ತೈದು ಬಿಜೆಪಿ ಸಂಸದರು ಲೋಕಸಭೆಯನ್ನು ಪ್ರವೇಶಿಸುತ್ತಿದ್ದಾರೆ. ಬೆಂಗಳೂರು ದಕ್ಷಿಣದಿಂದ ಐತಿಹಾಸಿಕ ಗೆಲುವು ಸಾಧಿಸಿರುವ ತೇಜಸ್ವಿ ಸೂರ್ಯ ಅವರು ಈ ಬಾರಿ ಕರ್ನಾಟಕದಿಂದ ಆಯ್ಕೆಯಾಗಿರುವ ಅತೀ ಕಿರಿಯ ಸಂಸದರು. ಉತ್ತಮ ವಾಗ್ಮಿ ಹಾಗೂ ಬಿಜೆಪಿಯ ಕಟ್ಟಾ ಬೆಂಬಲಿಗರಾಗಿರುವ ಸೂರ್ಯ ಅವರು ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಹಾಗೂ ಬೆಂಗಳೂರಿನ ಕೆರೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ನಿರ್ಧಾರಿಸಿದ್ದರೆ. ತೇಜಸ್ವಿಯವರ ಈ ನಿರ್ಧಾರಕ್ಕೆ ಜನರು ಭೇಶ್ ಎನ್ನುತ್ತಿದ್ದಾರೆ.
ಇನ್ನೋರ್ವ ಬಿಜೆಪಿ ಸಂಸದನ ದಿಟ್ಟ ನಿರ್ಧಾರ ;
‘ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇನ್ನು ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ’ ಎಂದು ದಾವಣಗೆರೆ ಕ್ಷೇತ್ರದ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ ಘೋಷಣೆ ಮಾಡಿದ್ದಾರೆ. ‘ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇನ್ನು ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ’ ಎಂದು ದಾವಣಗೆರೆ ಕ್ಷೇತ್ರದ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ ಘೋಷಣೆ ಮಾಡಿದ್ದಾರೆ
ಲೋಕಸಭಾ ಚುನಾವಣೆಯಲ್ಲಿ ಗೆದ್ದ ದಿನವೇ ಜಿ.ಎಂ.ಸಿದ್ದೇಶ್ವರ (66) ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ದಾವಣಗೆರೆ ಕ್ಷೇತ್ರದಿಂದ ಮೂರು ಬಾರಿ ಗೆಲುವು ಸಾಧಿಸಿದ್ದ ಅವರು, 2019ರ ಚುನಾವಣೆಯಲ್ಲಿಯೂ ಗೆದ್ದು ಸಂಸತ್ ಪ್ರವೇಶಿಸಿದ್ದಾರೆ.’ನಾನು ಚುನಾವಣೆಗೂ ಮುನ್ನ ಇದನ್ನು ಹೇಳಿದ್ದೆ. ಗೆದ್ದ ಮೇಲೆಯೂ ಹೇಳುತ್ತಿದ್ದೇನೆ. ಇನ್ನು ಮುಂದೆ ಯಾವ ಚುನಾವಣೆಗೂ ನಾನು ಸ್ಪರ್ಧೆ ಮಾಡುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿಯೂ ಕಣಕ್ಕಿಳಿಯುವುದಿಲ್ಲ’ ಎಂದು ಜಿ.ಎಂ.ಸಿದ್ದೇಶ್ವರ ಸ್ಪಷ್ಟಪಡಿಸಿದರು.

Comments
Post a Comment