ನೀರಿನ ವಿವಾದದಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಧ್ವನಿ ಎತ್ತಿ ಜನರ ಪರ ನಿಂತ ಕಾಂಗ್ರೆಸ್ ಶಾಸಕ !! ಸರ್ಕಾರಕ್ಕೆ ಬಂತು ಆಪತ್ತು


ಬೆಂಗಳೂರಿಗೆ ಶಿವಮೊಗ್ಗ ಜಿಲ್ಲೆಯ ಶರಾವತಿ ನದಿ ನೀರು ಹರಿಸುವ ರಾಜ್ಯ ಸರ್ಕಾರದ ಯೋಜನೆಯನ್ನು ವಿರೋಧಿಸುತ್ತೇವೆ ಎಂದು ಹಿರೇಕೆರೂರಿನ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ಟ್ವೀಟ್ ಮಾಡುವ ಮೂಲಕ ದೋಸ್ತಿ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಅವರು, ಈ ಯೋಜನೆಗೆ ವಿರೋಧವಿದೆ. ಬೆಂಗಳೂರು ಬೆಳೆಯುವುದನ್ನು ನಿಲ್ಲಿಸಿ, ಉತ್ತರ ಕರ್ನಾಟಕವನ್ನು ಬೆಳಸಿ, ಇಲ್ಲಿ ಸಾಕಷ್ಟು ನದಿಗಳಿವೆ.ಅವುಗಳನ್ನು ಅಭಿವೃದ್ಧಿ ಮಾಡಿ ಉತ್ತರ ಕರ್ನಾಟಕದ ಬಗ್ಗೆ ಕಾಳಜಿ ವಹಿಸಿ ಎಂದು ಪರೋಕ್ಷವಾಗಿ ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

Comments