ಇದು ನಿಜಕ್ಕೂ ಅದೃಷ್ಟವಂತರ ಜಿಲ್ಲೆ !! ಒಂದೇ ಜಿಲ್ಲೆಗೆ 4 ಸಚಿವ ಸ್ಥಾನಗಳನ್ನು ಕೊಡಲು ಆದೇಶಿಸಿದ ಬಿಜೆಪಿ ಹೈಕಮಾಂಡ್


ರಾಜ್ಯದಲ್ಲಿ ಜನರ ನಿರೀಕ್ಷೆಯಂತೆ BS ಯಡಿಯೂರಪ್ಪ ಸರ್ಕಾರ ರಚನೆಯಾಗಿದೆ. ಇದಕ್ಕೆ ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ.  ಇದರಿಂದ ರಾಜ್ಯದ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.

ಇನ್ನು ಅತೃಪ್ತರನ್ನು ಅನರ್ಹಗೊಳಿಸುವ ಮೂಲಕ ಕಾಂಗ್ರೆಸ್ ಹೆದರಿಸುವ ಕೆಲಸ ಮಾಡುತ್ತಿದೆ. ಮೊದಲಿನಿಂದಲೂ ಕಾಂಗ್ರೆಸ್ ಹೆದರಿಸುವ ಕೆಲಸ ಮಾಡುತ್ತಲೇ ಬಂದಿದೆ ಎಂದರು.

ಬಿಎಸ್ ವೈ ಸಂಪುಟದಲ್ಲಿ ಬೆಳಗಾವಿ ಜಿಲ್ಲೆಗೆ 4 ಸಚಿವ ಸ್ಥಾನ ನೀಡುವ ಬೇಡಿಕೆ ಇಡಲಾಗಿದೆ. ಹೆಚ್ಚು ಸಿಕ್ಕಷ್ಟು ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಬೆಳಗಾವಿಯಲ್ಲಿ ಸಚಿವ ಸುರೇಶ ಅಂಗಡಿ‌ ಹೇಳಿದ್ದಾರೆ.

Comments