ಇದೇ ಸೋಮವಾರ(ಜು.29)ದಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸದನದಲ್ಲಿ ಬಹುಮತ ಸಾಬೀತು ಮಾಡಬೇಕಿದ್ದು, ಇಡೀ ದೇಶದ ಚಿತ್ತ ಇದೀಗ ಕರ್ನಾಟಕ ವಿಧಾನಸಭೆಯತ್ತ ನೆಟ್ಟಿದೆ.
ಈ ಮಧ್ಯೆ ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸುಭದ್ರ ಹಾಗೂ ಅಭಿವೃದ್ಧಿ ಪರ ಆಡಳಿತ ನೀಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ, ಯಡಿಯೂರಪ್ಪ ಸರ್ಕಾರ ಕರ್ನಾಟಕದಲ್ಲಿ ಸುಭದ್ರ ಹಾಗೂ ಅಭಿವೃದ್ಧಿ ಪರ ಆಡಳಿತ ನೀಡಲಿದೆ ಎಂದು ದೇಶದ ಜನರಿಗೆ ಭರವಸೆ ನೀಡುವುದಾಗಿ ಹೇಳಿದ್ದಾರೆ.
ನೂತನ ಬಿಜೆಪಿ ಸರ್ಕಾರದ ಬಗ್ಗೆ ಸ್ಪೋಟಕ ಮಾಹಿತಿ ಹೊರ ಹಾಕಿದ ಚಾಣಕ್ಯ !! ಎಲ್ಲಾ ನಮ್ಮ ಕೈಯಲ್ಲಿ

Comments
Post a Comment