ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಮುಕ್ತಾಯ !! ಯಡಿಯೂರಪ್ಪ ಬಲಗೈ ಬಂಟ ಮುಂದಿನ ಸ್ಪೀಕರ್


ಬೆಂಗಳೂರು: ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ನೂತನ ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ನಾಳೆ ಸದನದಲ್ಲಿ ಅಧಿಕೃತ ಘೋಷಣೆಯಾಗಲಿದೆ.
ಸ್ಪೀಕರ್ ಸ್ಥಾನಕ್ಕೆ ಬಿಜೆಪಿಯಿಂದ ಕಾಗೇರಿ ಅವರೊಂದಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಅವರ ಹೆಸರು ಕೇಳಿಬಂದಿತ್ತು. ಆದರೆ, ಇಂದು ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಸಿದರು. ಇನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಸ್ಪೀಕರ್ ಚುನಾವಣೆಗೆ ಯಾರೂ ನಾಮಪತ್ರ ಸಲ್ಲಿಸದೇ ಹಿಂದೆ ಸರಿದರು. ಹೀಗಾಗಿ ಸ್ಪೀಕರ್ ಸ್ಥಾನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇನ್ನು ನೂತನ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಗೇರಿ ಅವರು ಸಂತಸ ಹಂಚಿಕೊಂಡಿದ್ದಾರೆ.

Comments