ರಾಜ್ಯದ 19ನೇ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದವರೊಬ್ಬರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಇದರಿಂದಾಗಿ ದೋಸ್ತಿ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದ ಉದಯ್ ಹೊಳ್ಳ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇವರು ಆ ಸ್ಥಾನಕ್ಕೆ ನೇಮಕಗೊಂಡಿದ್ದರು.
ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಿದ್ಧಗೊಳ್ಳುತ್ತಿದ್ದಂತೆ ಉದಯ್ ಹೊಳ್ಳ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶೀಘ್ರದಲ್ಲೇ ಮತ್ತೊಬ್ಬರು ಅಡ್ವೋಕೇಟ್ ಜನರಲ್ ಆಗಿ ನೇಮಕಗೊಳ್ಳಲಿದ್ದಾರೆಂದು ಹೇಳಲಾಗಿದೆ.

Comments
Post a Comment