ಜೇಟ್ಲಿ ಅಗಲಿಕೆಯ ನಡುವೆಯು 3 ಉಪ ಮುಖ್ಯಮಂತ್ರಿಗಳನ್ನು ಘೋಷಿಸಿದ ಮುಖ್ಯಮಂತ್ರಿ !! !1.ಅರವಿಂದ ಲಿಂಬಾವಳಿ ಮತ್ತು ಇನ್ನೂ 2 ಬಲಿಷ್ಠರಿಗೆ ಸಿಕ್ಕಿತು ಡಿಸಿಎಂ.ಪಟ್ಟ



ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ 17 ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ ಮಾಡಲಿದ್ದಾರೆ.
ಸಿಎಂ ಬಿಎಸ್ ವೈ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮೂವರು ಡಿಸಿಎಂ ಹುದ್ದೆಗಳು ಸೃಷ್ಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ 17 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ 17 ಅನರ್ಹ ಶಾಸಕರೂ ಪ್ರಭಾವಿ ಖಾತೆಗಳ ಬೇಡಿಕೆ ಇಟ್ಟಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಭಾವಿ ನಾಯಕರಿಗೆ ಮೂವರು ಡಿಸಿಎಂ ಹುದ್ದೆ ನೀಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಕುರುಬ ಸಮುದಾಯದ ಕೆ.ಎಸ್. ಈಶ್ವರಪ್ಪ, ಒಕ್ಕಲಿಗ ಸಮುದಾಯದ ಆರ್. ಅಶೋಕ್ ಮತ್ತು ದಲಿತ ಸಮುದಾಯದ ಗೋವಿಂದ ಕಾರಜೋಳ ಗೆ ಡಿಸಿಎಂ ಹುದ್ದೆ ನೀಡುವ ಕುರಿತು ಚರ್ಚೆ ನಡೆಯುತ್ತಿದೆ ಎನ್ನಲಾಗಿದ್ದು, ಡಿಸಿಎಂ ಹುದ್ದೆ ಫೈನಲ್ ಆದ ಬಳಿಕ ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ನಡೆಯಲಿದೆ ಎನ್ನಲಾಗುತ್ತಿದೆ.

Comments