ಸಚಿವ ಸ್ಥಾನಾಕಾಂಕ್ಷಿಗಳಾಗಿದ್ದ 6 ಮಂದಿ ಬಿಜೆಪಿ ಶಾಸಕರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸಭೆಯ ವಿವಿಧ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿದ್ದ ಶಾಸಕರಲ್ಲಿ 6 ಮಂದಿಗೆ ವಿಧಾನಸಭೆಯ ವಿವಿಧ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಸುಳ್ಯ ಶಾಸಕ ಎಸ್. ಅಂಗಾರ ಅವರನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಹಿರಿಯೂರು ಶಾಸಕಿ ಪೂರ್ಣಿಮಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿದ್ದಾರೆ.
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಗ್ರಂಥಾಲಯ ಸಮಿತಿಗೆ ಅಧ್ಯಕ್ಷರಾಗಿದ್ದು, ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್ ಹಕ್ಕುಬಾಧ್ಯತಾ ಸಮಿತಿ ಅಧ್ಯಕ್ಷರಾಗಿದ್ದಾರೆ.

Comments
Post a Comment