ಅನರ್ಹ ಶಾಸಕರಿಗೆ ಬಿಗ್ ರಿಲೀಫ್ , ಕೇವಲ ಓರ್ವ ಅನರ್ಹ ಶಾಸಕನಿಗೆ ಬಿಜೆಪಿಯಿಂದ ಟಿಕೆಟ್


ಸುಪ್ರೀಂಕೋರ್ಟ್ ತೀರ್ಪು ಅನರ್ಹರ ಪರವಾಗಿ ಬಂದಲ್ಲಿ ಎಲ್ಲ ಅನರ್ಹರಿಗೂ ಬಿಜೆಪಿಯಿಂದ ಉಪಚುನಾವಣೆ ಟಿಕೆಟ್ ನೀಡಲಾಗುತ್ತದೆ ಎಂಬುದು ಬಹುತೇಕ ಖಾಯಂ ಆಗಿದೆ. ಅಂತೆಯೇ ಆನಂದ್ ಸಿಂಗ್‌ಗೂ ಸಹ.

ಆದರೆ ಅನರ್ಹ ಶಾಸಕ ಆನಂದ್ ಸಿಂಗ್‌ಗೆ ಟಿಕೆಟ್ ನೀಡಬಾರದು ಎಂದು ಬಿಜೆಪಿಗರೇ ಆಕ್ಷೇಪ ಎತ್ತಿದ್ದು, ವಿಜಯನಗರ ಕ್ಷೇತ್ರದ ಬಿಜೆಪಿ ಮುಖಂಡರು ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದಾರೆ.


'ವಿಜಯನಗರ ಹೋರಾಟ' ಪ್ರಾರಂಭಿಸಿದ ಅನರ್ಹ ಶಾಸಕ ಆನಂದ್ ಸಿಂಗ್
ನಿನ್ನೆ ವಿಜಯನಗರದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಹೊಸಪೇಟೆ ತಾಲ್ಲೂಕಿನ ಬಿಜೆಪಿಯ ವಿವಿಧ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು ಆನಂದ್ ಸಿಂಗ್‌ಗೆ ಬಿಜೆಪಿ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದರು.

ಆನಂದ್ ಸಿಂಗ್ ಎರಡು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು, ಒಂದು ಬಾರಿ ಸಚಿವರೂ ಆಗಿದ್ದರು. ಆದರೂ ಸಹ ಕಳೆದ ಚುನಾವಣೆ ಅವಧಿಯಲ್ಲಿ ಪಕ್ಷತ್ಯಜಿಸಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಆದರೆ ಈಗ ಮತ್ತೆ ಬಿಜೆಪಿ ಟಿಕೆಟ್‌ನಿಂದ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಇದು ಸ್ಥಳೀಯ ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಬಿಜೆಪಿ ಸಭೆಗೂ ಅಡ್ಡಿಪಡಿಸಿದ ಮುಖಂಡರು
'ಸಕಾರಣವಿಲ್ಲದೆ ಬಿಜೆಪಿ ತೊರೆದಿದ್ದ ಆನಂದ್ ಸಿಂಗ್'
ಯಾವುದೇ ಸಕಾರಣವಿಲ್ಲದೆ ಆನಂದ್ ಸಿಂಗ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಈಗ ಮತ್ತೆ ವೈಯಕ್ತಿಕ ಲಾಭಕ್ಕಾಗಿ ಬಿಜೆಪಿ ಸೇರುತ್ತಿದ್ದಾರೆ. ಇದಕ್ಕೆ ಅವಕಾಶ ಕೊಡಬಾರದು ಎಂದು ಬಿಜೆಪಿಗರು ಒತ್ತಾಯಿಸಿದರು. ನಿನ್ನೆ ಕರೆಯಲಾಗಿದ್ದ ಬಿಜೆಪಿ ಸಭೆಗೂ ಅಡ್ಡಿಪಡಿಸಿದ ಸ್ಥಳೀಯ ಬಿಜೆಪಿ ಮುಖಂಡರು, ಟಿಕೆಟ್ ವಿಷಯ ಇತ್ಯರ್ಥವಾಗುವವರೆಗೂ ಯಾವುದೇ ಸಭೆ ನಡೆಸಬಾರದು ಎಂದು ಪಟ್ಟು ಹಿಡಿದರು.

ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹರಾದ ಆನಂದ್ ಸಿಂಗ್
ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಆನಂದ್ ಸಿಂಗ್
ಆನಂದ್ ಸಿಂಗ್ ಅವರು ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆ ಆಗಿ ನಂತರ ರಾಜೀನಾಮೆ ನೀಡಿದ್ದರು. ಸಚಿವ ಸ್ಥಾನ ವಂಚಿತ ಅತೃಪ್ತರ ಗುಂಪಿನಲ್ಲಿದ್ದ ಅವರು ಸರ್ಕಾರದ ಕಾರ್ಯಕ್ಷಮತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ನಂತರ ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಇವರನ್ನು ಅನರ್ಹಗೊಳಿಸಲಾಯಿತು.


ಹೊಸ ಜಿಲ್ಲೆ ರಚನೆಗೆ ಯಡಿಯೂರಪ್ಪ ಆಸಕ್ತಿ, ಅಧಿಕೃತ ಆದೇಶ ಬಾಕಿ
ಸುಪ್ರೀಂಕೋರ್ಟ್ ತೀರ್ಪಿನ ಮೇಲೆ ಅವಲಂಬಿತ
ಉಪಚುನಾವಣೆಗೆ ಬಿಜೆಪಿಯಿಂದ ಟಿಕೆಟ್?
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಸಹಾಯ ಮಾಡಿರುವ ಆನಂದ್ ಸಿಂಗ್‌ಗೆ ಈಗ ಮತ್ತೆ ಬಿಜೆಪಿ ಟಿಕೆಟ್ ನೀಡುವ ಭರವಸೆ ದೊರೆತಿದ್ದು. ವಿಜಯನಗರ ಕ್ಷೇತ್ರದಿಂದಲೇ ಅವರು ಬಿಜೆಪಿ ಸ್ಪರ್ಧಿಸಲಿದ್ದಾರೆ. ಆದರೆ ಅವರ ಸ್ಪರ್ಧೆಯು ಸುಪ್ರೀಂಕೋರ್ಟ್‌ನ ತೀರ್ಪಿನ ಮೇಲೆ ಅವಲಂಬಿತವಾಗಿದೆ.

8288 ಮತಗಳ ಅಂತರದಲ್ಲಿ ಗೆದ್ದಿದ್ದರು ಆನಂದ್ ಸಿಂಗ್
ಬಿಜೆಪಿ ಎದುರಾಳಿಯನ್ನು ಸೋಲಿಸಿದ್ದ ಆನಂದ್ ಸಿಂಗ್
ಆನಂದ್ ಸಿಂಗ್ ಅವರು ವಿಜಯನಗರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ ಮೇಲೆ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ, ತಮ್ಮ ಸಮೀಪ ಪ್ರತಿಸ್ಪರ್ಧಿ ಬಿಜೆಪಿಯ ಎಚ್‌.ಆರ್.ಗವಿಯಪ್ಪ ಅವರನ್ನು 8288 ಮತಗಳ ಅಂತರದಿಂದ ಸೋಲಿಸಿದ್ದರು.


ಕಾಂಗ್ರೆಸ್ ನಾಯಕರ ವಿರುದ್ಧವೇ ಶಾಸಕ ಆನಂದ್ ಸಿಂಗ್ ದೂರು
ಶವಸಂಸ್ಕಾರಕ್ಕೂ ಪರದಾಟ; ಅಸುಂಡಿ ಗ್ರಾಮದ ದಾರುಣ ಕಥೆ

2ನೇ ಉಪ ಚುನಾವಣೆ ಎದುರಿಸುತ್ತಿರುವ ವಿಜಯನಗರ ಪರಿಚಯ

ಉಪಚುನಾವಣೆ ಘೋಷಣೆ; ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ ಸಿಎಂ

ಅನರ್ಹ ಶಾಸಕರ ಹಿತ ಮುಖ್ಯ ಅಲ್ಲ; ವಿಜಯನಗರ ಜಿಲ್ಲೆ ರಚನೆಗೆ ಜಿಲ್ಲಾ ಹೋರಾಟ ಸಮಿತಿ ವಿರೋಧ

ಉತ್ತರೆಗೆ ತತ್ತರಿಸಿದ ಜನ; ಸಂತ್ರಸ್ತರ ಸಂತೈಸಿದ ಶಾಸಕ ಜಿ.ಸೋಮಶೇಖರ ರೆಡ್ಡಿ

ಸಂಪಾದಕರಿಗೆ ಪತ್ರ: ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದರೆ ಬರೀ ತೊಂದರೆ

ಹೊಸ ಜಿಲ್ಲೆ ರಚನೆಗೆ ಯಡಿಯೂರಪ್ಪ ಆಸಕ್ತಿ, ಅಧಿಕೃತ ಆದೇಶ ಬಾಕಿ

ಸೆ.21ರಿಂದ ಹೊಸಪೇಟೆ-ಕೊಟ್ಟೂರು ಪ್ಯಾಸೆಂಜರ್ ರೈಲು ಸಂಚಾರ

10 ಲಕ್ಷಕ್ಕೂ ಅಧಿಕ ಗಣಿ ಅವಲಂಬಿತರ ಕುಟುಂಬಗಳ ಗೋಳು ಕೇಳುವವರಿಲ್ಲ!

'ವಿಜಯನಗರ ಹೋರಾಟ' ಪ್ರಾರಂಭಿಸಿದ ಅನರ್ಹ ಶಾಸಕ ಆನಂದ್ ಸಿಂಗ್

Comments