ಬ್ರೇಕಿಂಗ್ ನ್ಯೂಸ್ !! ಬಿಜೆಪಿ ಸರ್ಕಾರವನ್ನು ಮುಗಿಸಲು ಬಂಡಾಯ ಎದ್ದ ಬಿಜೆಪಿಯ ಈ 8 ಜನ ಶಾಸಕರು


ಅನರ್ಹ ಶಾಸಕರ ತ್ಯಾಗದಿಂದಲೇ ಬಿಜೆಪಿ ಸರ್ಕಾರ ರಚನೆಯಾಗಿದೆ ಎಂಬುದು ಭ್ರಮೆ. ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಿದೆ ಎಂಬುದು ಹೈಕಮಾಂಡ್ ಭ್ರಮೆಯಾಗಿದೆ ಎಂದು ಬಿಜೆಪಿ ಮುಖಂಡ ರಾಜು ಕಾಗೆ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರಖುರ್ದದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಈಗಾಗಲೇ 106 ಶಾಸಕರಿದ್ದಾರೆ. ಪಕ್ಷ ಬಹುಮತಕ್ಕೆ ಇನ್ನು 8 ಶಾಸಕರ ಅವಶ್ಯಕತೆ ಇದೆ. ಉಪಚುನಾವಣೆಯಲ್ಲಿ 15 ಕ್ಷೇತ್ರಗಳ ಪೈಕಿ 8ರಲ್ಲಿ ಗೆಲ್ಲಲೇಬೇಕು ಎಂದು ತಿಳಿಸಿದ್ದಾರೆ.

ಬಿಜೆಪಿಯ 8 ಶಾಸಕರು ಬಂಡಾಯವೆದ್ದರೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ. ಉಪಚುನಾವಣೆಯಲ್ಲಿ ನನಗೆ ಟಿಕೆಟ್ ನೀಡಲ್ಲ ಎಂದು ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ ಎಂದು ರಾಜು ಕಾಗೆ ತಿಳಿಸಿದ್ದಾರೆ.

Comments