ಅಧಿಕಾರ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ !! ಭರ್ಜರಿ ಗೆಲುವಿನೊಂದಿಗೆ ಅಧಿಕಾರ ಹಿಡಿದ ಬಿಜೆಪಿ


ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಜನ್ ಕೀ ಬಾತ್ ಸಂಸ್ಥೆಯ ಚುನಾವಣಾಪೂರ್ವ ಸಮೀಕ್ಷೆಯಲ್ಲಿ ತಿಳಿದುಬಂದಿದೆ.

ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜನ್ ಕೀ ಬಾತ್ ಸಂಸ್ಥೆ ಸಮೀಕ್ಷೆ ನಡೆಸಿದೆ. ಚುನಾವಣಾಪೂರ್ವ ಸಮೀಕ್ಷೆಯಲ್ಲಿ ಹೆಚ್ಚು ಸ್ಥಾನಗಳೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ – ಶಿವಸೇನೆ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರಲಿದೆ. ಸಮೀಕ್ಷೆಯ ಪ್ರಕಾರ ಬಿಜೆಪಿ 142 ರಿಂದ 147, ಶಿವಸೇನೆ 83 ರಿಂದ 85 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಕಾಂಗ್ರೆಸ್ 21 ರಿಂದ 23 ಕ್ಷೇತ್ರಗಳಲ್ಲಿ ಗೆಲ್ಲಬಹುದು. ಕಾಂಗ್ರೆಸ್ ಮಿತ್ರ ಪಕ್ಷವಾಗಿರುವ ಎನ್.ಸಿ.ಪಿ. 27 ರಿಂದ 29 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 288 ಕ್ಷೇತ್ರಗಳಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಕ್ಕೆ 145 ಸ್ಥಾನಗಳು ಬೇಕಿದ್ದು, ಬಿಜೆಪಿ-ಶಿವಸೇನೆ ಮೈತ್ರಿಕೂಟ 227 ಕ್ಷೇತ್ರಗಳಲ್ಲಿ ಗೆಲ್ಲಬಹುದು ಎಂದು ಸಮೀಕ್ಷೆ ತಿಳಿಸಿದೆ.

ಹರಿಯಾಣ ವಿಧಾನಸಭೆಯಲ್ಲಿ 90 ಕ್ಷೇತ್ರಗಳಿದ್ದು ಬಹುಮತಕ್ಕೆ 46 ಕ್ಷೇತ್ರಗಳು ಬೇಕಿದೆ. ಬಿಜೆಪಿ 50 ರಿಂದ 70 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ. ಕಾಂಗ್ರೆಸ್ 12 ರಿಂದ 15 ಕ್ಷೇತ್ರಗಳಲ್ಲಿ ಗೆಲ್ಲಬಹುದು ಎಂದು ಸಮೀಕ್ಷೆ ತಿಳಿಸಿದೆ.

Comments