ಸಿದ್ದಗಂಗಾ ಶ್ರೀಗಳಿಗೆ ಮೊದಲು ಭಾರತ ರತ್ನ ನೀಡಿ, ಸಿದ್ದರಾಮಯ್ಯ




ಬೆಂಗಳೂರು, ಅಕ್ಟೋಬರ್ 18: ಮಹಾತ್ಮ ಗಾಂಧಿ ಹತ್ಯೆಗೆ ಸಂಚು ರೂಪಿಸಿದ್ದವರಲ್ಲಿ ಸಾವರ್ಕರ್ ಕೂಡ ಒಬ್ಬರು. ಆದರೆ ಸೂಕ್ತ ಸಾಕ್ಷ್ಯ ಇಲ್ಲದ ಕಾರಣ ಅವರನ್ನು ಆರೋಪಿಯಾಗಿ ಗುರಿತಿಸಿರಲಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮೊದಲು ಸಿದ್ದಗಂಗಾ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಿ ಎಂದು ಬಿಜೆಪಿ ಸರ್ಕಾರವನ್ನು ಆಗ್ರಹಿಸಿದ್ದಾರೆ.


'ಸಾವರ್ಕರ್ ಅವರಿಗೆ 'ಭಾರತ ರತ್ನ' ಆ‌ ಮೇಲೆ ಕೊಡುವಿರಂತೆ, ಮೊದಲು ಸಾಮಾಜಿಕ‌ ಸೇವೆಗಾಗಿ ತನ್ನ ಬದುಕನ್ನು ತೇದು ಲಿಂಗೈಕ್ಯವಾಗಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಮೊದಲು ಭಾರತರತ್ನ ನೀಡಿ. ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ' ಎಂದು ಸಿದ್ದರಾಮಯ್ಯ ಶುಕ್ರವಾರ ಟ್ವೀಟ್ ಮಾಡಿದ್ದಾರೆ

Comments