ತಿಹಾರ ಜೈಲಿನಿಂದ ಹೋರಟ ಡಿಕೆಶಿ !! ರಾಜ್ಯ ಬಿಜೆಪಿ ನಾಯಕರಲ್ಲಿ ಭಯದ ವಾತಾವರಣ ಸೃಷ್ಟಿ




ದೆಹಲಿ ನಿವಾಸದಲ್ಲಿ ಸಿಕ್ಕ ಆಕ್ರಮ ಹಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿದ್ದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಮಂಜೂರು ಮಾಡಿದೆ.


ಜೈಲಿನಲ್ಲಿದ್ದ ಕಾರಣ ದಸರಾ ಹಬ್ಬವನ್ನು ಕುಟುಂಬದೊಂದಿಗೆ ಆಚರಿಸಲು ಸಾಧ್ಯವಾಗದ ಶಿವಕುಮಾರ್ ಅವರಿಗೆ ದೀಪಾವಳಿ ಹಬ್ಬಕ್ಕೂ ಮುನ್ನ ಶುಭ ಸುದ್ದಿ ಸಿಕ್ಕಿದ್ದು, ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಇಂದು ಸಂಜೆ ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.


ಅಕ್ರಮ ಹಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಸತತ ವಿಚಾರಣೆಗೊಳಗಾಗಿದ್ದ ಡಿ.ಕೆ. ಶಿವಕುಮಾರ್ ನಂತರ ಬಂಧನಕ್ಕೊಳಗಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಶಿವಕುಮಾರ್ ಅವರನ್ನು ಬಳಿಕ ತಿಹಾರ್ ಜೈಲಿಗೆ ವರ್ಗಾಯಿಸಲಾಗಿತ್ತು.


ಡಿ.ಕೆ. ಶಿವಕುಮಾರ್‌ ಅವರಿಗೆ ಜಾಮೀನು ಕೊಡಿಸಲು ಘಟಾನುಘಟಿ ವಕೀಲರು ನ್ಯಾಯಾಲಯದಲ್ಲಿ ತಮ್ಮ ವಾದ ಮಂಡಿಸಿದ್ದರು. ವಿಚಾರಣೆ ಕೆಲ ದಿನಗಳ ಹಿಂದೆ ಮುಂದೂಡಿಕೆಯಾಗಿದ್ದರಿಂದ ಡಿ.ಕೆ. ಶಿವಕುಮಾರ್‌ ಅವರಿಗೆ ನಿರಾಸೆಯಾಗಿತ್ತು. ಕೊನೆಗೂ ದೆಹಲಿ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದ್ದು, ಬೆಂಬಲಿಗರಲ್ಲಿ ಸಂಭ್ರಮ ಮನೆ ಮಾಡಿದೆ.

Comments