ಜೆಡಿಎಸ್ ಗೆ ಗುಡ್ ನ್ಯೂಸ್ !! ಸರ್ಕಾರ ರಚನೆಯ ಬಗ್ಗೆ ಸುಳಿವು ಕೊಟ್ಟ ಕುಮಾರಸ್ವಾಮಿ, ಸಚಿವ ಸ್ಥಾನ ಸಿಗದ ಶಾಸಕರು ರಹಸ್ಯ ಸಭೆ
ಬಿಜೆಪಿ ಭಿನ್ನಮತೀಯ ಶಾಸಕರು ಕೆಲವರು ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ರಾಜಕೀಯ ಚರ್ಚೆ ನಡೆಸಿದ್ದಾರೆ.
ಸಚಿವ ಸ್ಥಾನ ಸಿಗದೇ ಪಕ್ಷದ ಮೇಲೆ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ಶಾಸಕರಾದ ಉಮೇಶ್ ಕತ್ತಿ, ಮುರಗೇಶ ನಿರಾಣಿ ಹಾಗೂ ಗೂಳಿಹಟ್ಟಿ ಶೇಖರ್ ಅವರು ಕುಮಾರಸ್ವಾಮಿ ಅವರನ್ನು ಭೇಟಿ ಆಗಿದ್ದಾರೆ ಎಂಬ ಸುದ್ದಿ ವಿಧಾನಸೌಧ ಮೊಗಸಾಲೆಯಲ್ಲಿ ಹರಿದಾಡುತ್ತಿದೆ.
ಪಕ್ಷಕ್ಕೆ ಬಂದ ಹೊಸಬರಿಗೆ ಅವಕಾಶ ಕೊಟ್ಟು ಮೂಲ ಬಿಜೆಪಿಗರನ್ನು ಕಡೆಗಣಿಸಿದ್ದಾರೆ ಎಂದು ಈಗಾಗಲೇ ಹಲವು ಮೂಲ ಬಿಜೆಪಿಗರು ರಾಜ್ಯ ಬಿಜೆಪಿ ನಾಯಕತ್ವದ ಮೇಲೆ ಸಿಟ್ಟಾಗಿದ್ದಾರೆ. ಇದೇ ಕಾರಣಕ್ಕೆ ಕೆಲವರು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರನ್ನು ಭೇಟಿ ಆಗಿ 'ಭವಿಷ್ಯ'ದ ಚರ್ಚೆ ಮಾಡಿದ್ದಾರೆ.
BJP Dissident MLAs Met HD Kumaraswamy
ಮುಂದಿನ ದಿನಗಳಲ್ಲಿ ಭಿನ್ನಮತ ಹೆಚ್ಚಾಗಿ ಸರ್ಕಾರ ಕೆಡವುವ ಪರಿಸ್ಥಿತಿ ನಿರ್ಮಾಣವಾದರೆ ತಾವು ಬೆಂಬಲ ನೀಡಬೇಕು ಎಂದು ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಕುಮಾರಸ್ವಾಮಿ ಅವರು ಸರ್ಕಾರ ಕೆಡವಲು ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ.
ಕೆಲ ಬಿಜೆಪಿ ಅತೃಪ್ತ ಶಾಸಕರು ರಹಸ್ಯ ಸಭೆಯಲ್ಲಿ ತೊಡಗಿದ್ದು ಬಿಜೆಪಿ ಸರಕಾರದ ಪತನಕ್ಕೆ ಇವರೇ
ಕಾರಣಾವಾಗುತ್ತಾರೆ, ಸರಕಾರ ಬಿದ್ದರೆ ಮುಂದೆ ನಮ್ಮದೇ ರಾಜಕೀಯ ಎಂದು ಸರ್ಕಾರ ರಚನೆಯ ಬಗ್ಗೆ ಸುಳಿವು ನೀಡಿದ್ದಾರೆ

Comments
Post a Comment