ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅನರ್ಹ ಶಾಸಕರಲ್ಲಿ ಕೆಲವರು ಮತ್ತೆ ಕಾಂಗ್ರೆಸ್ ಗೆ ವಾಪಸ್ ಆಗಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರ ಮನವೊಲಿಸಲು ಪ್ರಯತ್ನ ನಡೆದಿದೆ ಎಂದು ಹೇಳಲಾಗುತ್ತಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಹಿರಿಯ ನಾಯಕ ಹೆಚ್.ಕೆ.ಪಾಟೀಲ್ ಹಾಗೂ ರಾಮಲಿಂಗರೆಡ್ಡಿ ಅವರು ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ಈ ವೇಳೆ ಕೆಲ ಅನರ್ಹ ಶಾಸಕರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ಆಗುವ ಬಗ್ಗೆ ಆಸಕ್ತಿ ಹೊಂದಿದ್ದಾರೆ ಎನ್ನುವ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಅನರ್ಹ ಶಾಸಕರಾದ ಮುನಿರತ್ನ, ಭೈರತಿ ಬಸವರಾಜು, ಎಸ್.ಟಿ. ಸೋಮಶೇಖರ್ ಮತ್ತೆ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಹಿರಿಯ ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಪ್ರಯತ್ನಗಳು ನಡೆದಿವೆ ಎಂದು ಹೇಳಲಾಗುತ್ತಿದೆ.

Comments
Post a Comment