ಕೈ, ಬಿಜೆಪಿ ಹಿಂದಿಕ್ಕಿ ಜೆಡಿಎಸ್ ಗೆ ಹೆಚ್ಚು ಸ್ಥಾನ : ಮತ್ತೆ ಗೆದ್ದು ಬೀಗಿದ ಜೆಡಿಎಸ್, ಪಟ್ಟ ಯಾರಿಗೆ ?



ಪಟ್ಟಣ ಪಂಚಾಯಿತಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸುತ್ತಿದ್ದಂತೆ ಜೆಡಿಎಸ್ ಕಾಂಗ್ರೆಸ್, ಬಿಜೆಪಿ, ಪಕ್ಷಗಳ ಸದಸ್ಯರು ಅಧಿಕಾರಕ್ಕಾಗಿ ವರಿಷ್ಠರ ಹಿಂದೆ ದುಂಬಾಲು ಬಿದ್ದಿದ್ದಾರೆ.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಬಿ)ಗೆ ನಿಗದಿಯಾಗಿರುವುದರಿಂದ ಮೂರು ಪಕ್ಷಗಳ ಮುಖಂಡರು ಮತ್ತು ಸದಸ್ಯರಲ್ಲಿ ಸಂಚಲನವನ್ನೇ ಉಂಟು ಮಾಡಿದೆ. ಮೂರು ಪಕ್ಷಕ್ಕೂ ಯಾವುದೇ ರೀತಿಯ ಸ್ಪಷ್ಟ ಬಹಮತವನ್ನು ಪಟ್ಟಣದ ಜನತೆ ನೀಡದೇ ಇರುವುದರಿಂದ ಇತರೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಆಡಳಿತ ನಡೆಸುವಂತಹ ಪರಿಸ್ಥಿತಿ ಉಂಟಾಗಿರುವುದು ಮುಖಂಡರು ಕಸರತ್ತು ನಡೆಸಬೇಕಾಗಿದೆ.
ಗ್ರಾಮ ಪಂಚಾಯಿತಿಯಿಂದ 2002 ರಲ್ಲಿ ಪಟ್ಟಣ ಪಂಚಾಯಿತಿಯಾಗಿ ಮೇರ್ಲ್ದಜೆಗೆ ಹೊಂದಿದ ನಂತರ ಈ ಹಿಂದೆ ನಡೆದ ಎರಡು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯುವುರೊಂದಿಗೆ ಸ್ವಂತ ಬಲದ ಮೇಲೆ ಅಧಿಕಾರ ಚುಕ್ಕಾಣಿ ಹಿಡಿದಿತ್ತು.

Comments