ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರ ಮತ್ತು ಸಂಸತ್ ಸದಸ್ಯೆ ಶೋಭಾ ಕರಂದ್ಲಾಜೆ ಅವರಿಂದಲೇ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ಮಾನಸ ಪುತ್ರರು ಎಂದು ಹೇಳಿಕೊಂಡು ಓಡಾಡುತ್ತಿದ್ದವರೆ ತಿರುಗಿ ಬಿದ್ದಿದ್ದಾರೆ. ಬಹುತೇಕ ಶಾಸಕರು ತಮ್ಮ ಕ್ಷೇತ್ರಗಳಿಗೆ ಅನುದಾನ ನೀಡಿಲ್ಲವೆಂದು ಅಸಮಾಧಾನಗೊಂಡು ಗುಪ್ತಸಭೆಗಳನ್ನು ನಡೆಸಿದ್ದು ಶೀಘ್ರವೇ ಅಸಮಾಧಾನ ಸ್ಫೋಟಗೊಳ್ಳಲಿದೆ. ಮುಂದಿನ 6 ತಿಂಗಳಲ್ಲಿ ಯಡಿಯೂರಪ್ಪ ಸಿಎಂ ಕುರ್ಚಿ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

Comments
Post a Comment