ಮಮತಾ ಬ್ಯಾನರ್ಜಿ ಈಗಾಗಲೇ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು, ಕಾಂಗ್ರೆಸ್ ಕೂಡ ಕೊರೊನಾ ಕಾಲದಲ್ಲಿ ಪರೀಕ್ಷೆಗಳನ್ನು ನಡೆಸುವುದು ಬೇಡ ಎಂದು ಹೇಳಿದೆ.
ಪರೀಕ್ಷೆಯ ನೆಪದಲ್ಲಿ ವಿಪಕ್ಷಗಳನ್ನು ಒಗ್ಗೂಡಿಸಿ ಬಿಜೆಪಿ ವಿರುದ್ಧ ಸಾಂಘಿಕ ಹೋರಾಟ ನಡೆಸುವ ಉದ್ದೇಶವನ್ನು ಹೊಂದಲಾಗಿದೆ ಎನ್ನಲಾಗಿದೆ.
ಖುದ್ದು ಸೋನಿಯಾ ಗಾಂಧಿ ಅವರೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರಿಗೆ ಕರೆ ಮಾಡಿ ವರ್ಚುವಲ್ ಸಭೆಗೆ ಆಹ್ವಾನಿಸಿದ್ದಾರೆ.
ಆದರೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈ ಸಭೆಗೆ ಗೈರು ಹಾಜರಾಗಲಿದ್ದಾರೆ ಎನ್ನಲಾಗಿದ್ದು, ಕೇರಳದಲ್ಲಿ ಕಾಂಗ್ರೆಸ್ನಿಂದ ತೀವ್ರ ವಿರೋಧ ಎದುರಿಸುತ್ತಿರುವ ಪಿಣರಾಯಿ ವಿಜಯನ್ ಕೂಡ ಸಭೆಯಲ್ಲಿ ಭಾಗವಹಿಸುವುದು ಅನುಮಾನ ಎನ್ನಲಾಗಿದೆ.

Comments
Post a Comment