ಡಿ.ಕೆ ಶಿವಕುಮಾರ್ ಹೆಸರಿನಲ್ಲಿ ಕೋಲಾರಮ್ಮನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಚಂದ್ರಾರೆಡ್ಡಿ ಮಾತಾಡಿದರು. ಇದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಲಿದ್ಧಾರೆ ಎಂದು ಭವಿಷ್ಯ ನುಡಿದು ಕಾರ್ಯಕರ್ತರನ್ನು ಹುರಿದುಂಬಿಸಿದರು.
ಕೋಲಾರ(ಸೆ.05): ಮಾರಕ ಕೊರೋನಾ ವೈರಸ್ನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುಣಮುಖರಾದ ಕಾರಣ ಕೋಲಾರದ ಅಧಿದೇವತೆ ಕೋಲಾರಮ್ಮ ದೇಗುಲದಲ್ಲಿ ಕಾಂಗ್ರೆಸ್ಸಿಗರು ವಿಶೇಷ ಪೂಜೆ ಮಾಡಿಸಿದರು. ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಚಂದ್ರಾರೆಡ್ಡಿ ನೇತೃತ್ವದಲ್ಲಿ ಸಲ್ಲಿಸಿದ ಈ ವಿಶೇಷ ಪೂಜೆಯಲ್ಲಿ ಡಿ.ಕೆ ಶಿವಕುಮಾರ್ ಅಭಿಮಾನಿಗಳು ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಇದೇ ವೇಳೆ ಕೋಲಾರಮ್ಮ ದೇವಸ್ಥಾನದ ಎದುರು ಸುಮಾರು 501 ತೆಂಗಿನಕಾಯಿ ಹೊಡೆದು ಡಿ.ಕೆ ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥಿಸಿದರು. ಹಾಗೆಯೇ ಡಿ.ಕೆ ಶಿವಕುಮಾರ್ಗೆ ಜಯವಾಗಲಿ ಎಂಬ ಘೋಷಣೆಗಳು ಕೂಡ ಅಭಿಮಾನಿಗಳಿಂದ ಮೊಳಗಿದವು
ಡಿ.ಕೆ ಶಿವಕುಮಾರ್ ಹೆಸರಿನಲ್ಲಿ ಕೋಲಾರಮ್ಮನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಚಂದ್ರಾರೆಡ್ಡಿ ಮಾತಾಡಿದರು. ಇದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಲಿದ್ಧಾರೆ ಎಂದು ಭವಿಷ್ಯ ನುಡಿದು ಕಾರ್ಯಕರ್ತರನ್ನು ಹುರಿದುಂಬಿಸಿದರು.
ಕೇಂದ್ರ ಮತ್ತು ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರವು ಜನಪರ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಕೊರೋನಾ ವೈರಸ್ ತಡೆಗಟ್ಟಲು ಸರ್ಕಾರ ತೆಗೆದುಕೊಂಡ ಕ್ರಮಗಳು ಯಾವು ಫಲಿಸದ ಕಾರಣ ಇಂದು ಜನ ಆರ್ಥಿಕವಾಗಿ ಹಿಂದುಳಿಯಬೇಕಾಗಿದೆ. ಇದಕ್ಕೆ ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಆಡಳಿತದ ವೈಫಲ್ಯ ಎಂದು ಚಂದ್ರಾರೆಡ್ಡಿ ಗಂಭೀರ ಆರೋಪ ಎಸಗಿದರು.

Comments
Post a Comment